ಹಾವೇರಿ ಜಿಲ್ಲೆಯಾದ್ಯಂತ ಕಳೆದ ಹತ್ತು ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಹಲವಾರು ಗ್ರಾಮದ ಸೇತುವೆ ಹಾಗೂ ಹೊಲಗದ್ದೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ ನಾಶಗೊಂಡಿವೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ನಾಗನೂರು ಮತ್ತು ವರದಾಹಳ್ಳಿ ಗ್ರಾಮಗಳಿಗೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭೇಟಿ ನೀಡಿ ನೆರೆಹಾವಳಿಯಿಂದ ಹಾನಿಗಿಡಾದ ಬೆಳೆ, ಮನೆ ಹಾನಿಯನ್ನು ಪರಿಶೀಲಿಸಿದರು.
ತಾಲೂಕಾ ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸಿ ತುರ್ತು ಕ್ರಮ ವಹಿಸಲು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಕುಟುಂಬದವರೊಂದಿಗೆ ಕೆಲ ಕಾಲ ಚರ್ಚಿಸಿ ಸರ್ಕಾರ ಯಾವತ್ತೂ ನಿಮ್ಮೊಂದಿಗಿದೆ. ಚಿಂತೆ ಮಾಡುವ ಅಗತ್ಯವಿಲ್ಲ. ಮಳೆಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ಒದಗಿಸಲಿದ್ದೇವೆ ಎಂಬ ಅಭಿಪ್ರಾಯ ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ವಲಯ ಮಟ್ಟದ ಅಧಿಕಾರಿಗಳು ಗ್ರಾಮಸ್ಥರು ಪಾಲ್ಗೊಂಡಿದ್ದರು.
PublicNext
16/07/2022 02:49 pm