ನವದೆಹಲಿ: ಭಾರತಕ್ಕೆ ಡಿಸೆಂಬರ್ 4ರಂದು ಜವಾದ್ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದಾಗ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಜವಾದ್ ಪ್ರಭಾವದಿಂದ ಡಿಸೆಂಬರ್ 4 ಮತ್ತು 5ರಂದು ಆಂಧ್ರ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ. ಅದರಲ್ಲೂ ಮೊದಲು ಒಡಿಶಾದ ಕರಾವಳಿ ತೀರ ತಲುಪಲಿದೆ. ಈ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ, ಚಂಡಮಾರುತದ ಪ್ರಭಾವ ಹೆಚ್ಚಾಗಿ ಆಗಲಿರುವ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಮಾಡಿದ್ದು, ಅಲ್ಲಿನ ಜನರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಹಾಗೇ ರಕ್ಷಣಾ ಕಾರ್ಯಾಚರಣೆ ಆಗಮಿಸುವಂತೆ ಎನ್ಡಿಆರ್ಎಫ್, ಒಡಿಆರ್ಎಎಫ್ಗಳನ್ನೂ ವಿನಂತಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟಾರೆ ವಿಷಯಗಳ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
PublicNext
02/12/2021 05:59 pm