ಬೆಂಗಳೂರು: ಜೂನ್ 1ರಿಂದ ರಾಜ್ಯದಲ್ಲಿ ಮುಂಗಾರು ಪ್ರವೇಶ ಪಡೆಯಲಿದೆ. ಈಗಾಗಲೇ ಕೇರಳದಲ್ಲಿ ನಿನ್ನೆ ಭಾನುವಾರ ಮುಂಗಾರು ಪ್ರವೇಶ ಮಾಡಿದೆ. ಜೂನ್ 2ರಿಂದ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಗಾರು ಮಳೆ ವಾಡಿಕೆಗಿಂತ ಮೂರು ದಿನ ಮೊದಲೇ ಕೇರಳ ಪ್ರವೇಶಿಸಿದೆ. ಮುಂಗಾರು ಕೇರಳ ಪ್ರವೇಶಿಸಿದ ನಾಲ್ಕೈದು ದಿನಗಳಲ್ಲಿ ರಾಜ್ಯವನ್ನು ಪ್ರವೇಶಿಸಲಿದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 2 ರಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 2 ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
PublicNext
30/05/2022 07:39 am