ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕದಲ್ಲಿ ಹಸಿರು ಹೈಡ್ರೋಜನ್ ಸ್ಥಾವರ ಸ್ಥಾಪನೆ : ACME ಕಂಪೆನಿಯಿಂದ 52,000 ಕೋಟಿ ರೂ. ಹೂಡಿಕೆ

ಬೆಂಗಳೂರು: ಆಕ್ಮೆ (ACME ) ಕ್ಲೀನ್ ಟೆಕ್ ಸಲ್ಯೂಷನ್ ಕಂಪನಿ ಮಂಗಳೂರಿನಲ್ಲಿ ಹೈಡ್ರೋಜನ್ ಮತ್ತು ಅಮೋನಿಯಾ ಘಟಕ ಹಾಗೂ ಪೂರಕವಾಗಿ ಸೋಲಾರ್ ಘಟಕ ಸ್ಥಾಪನೆಗೆ 52 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರಾಜ್ಯ ಸರಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಆಕ್ಮೆ ಗ್ರೂಪ್ ಕಂಪೆನಿಯ ಸಿಓಓ ಸಂದೀಪ್ ಕಶ್ಯಪ್ ಅವರು ಒಪ್ಪಂದಕ್ಕೆ ಸಹಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದ್ದು, ಇದರ ಲಾಭ ಪಡೆದುಕೊಳ್ಳುವಂತೆ ಆಕ್ಮೆ ಗ್ರೂಪ್ ನವರಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯವು ಸದಾ ಹೊಸ ತಂತ್ರಜ್ಞಾನ, ಭವಿಷ್ಯದ ಯೋಜನೆಗಳಿಗೆ ಉತ್ತೇಜನ ನೀಡುತ್ತ ಬಂದಿದೆ. ಈ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರಕಾರ ತ್ವರಿತವಾಗಿ ಎಲ್ಲ ಅಗತ್ಯ ಬೆಂಬಲ ನೀಡಲಿದೆ. ನೀವು ಸಹ ಸಕಾಲದಲ್ಲಿ ಯೋಜನೆ ಜಾರಿಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಆಕ್ಮೆ ಗ್ರೂಪ್ ಜಾಗತಿಕ ಮಟ್ಟದಲ್ಲಿ ಹೈಡ್ರೋಜನ್ –ಅಮೋನಿಯ ಘಟಕಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ರಾಜಸ್ಥಾನದ ಬಿಕಾನೇರ್ನಲ್ಲಿ ವಿಶ್ವದ ಮೊದಲ ಹೈಡ್ರೋಜನ್ ಅಮೋನಿಯ, ಸೋಲಾರ್ ಘಟಕವನ್ನು ಸ್ಥಾಪಿಸಿದ್ದು, ಕಾರ್ಯಾರಂಭ ಮಾಡಿದೆ ಎಂದು ಆಕ್ಮೆ ಗ್ರೂಪ್ ನ ಉಪಾಧ್ಯಕ್ಷ ಶಶಿ ಶೇಖರ್ ತಿಳಿಸಿದರು.

ಈ ಸಂದರ್ಭದಲ್ಲಿ ಇಂಧನ ಸಚಿವ ವಿ. ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಆಕ್ಮೆ ಗ್ರೂಪ್ನ ಅಧಿಕಾರಿಗಳಾದ ಎಂ.ವಿ.ವಿ.ಎಸ್ ರೆಡ್ಡಿ, ಅರುಣ್ ಚೋಪ್ರಾ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

07/06/2022 12:35 pm

Cinque Terre

22.24 K

Cinque Terre

0

ಸಂಬಂಧಿತ ಸುದ್ದಿ