ನವದೆಹಲಿ: ನಗರದಲ್ಲಿ ಇಷ್ಟು ದಿನ ಬಿಸಿಗಾಳಿಯಿಂದ ಹೈರಾಣಾಗಿದ್ದ ಜನರು ಇಂದು ನಿಟ್ಟುಸಿರು ಬಿಟ್ಟಿದ್ದಾರೆ. ಯಾಕೆಂದರೆ ನಗರದ ಸುತ್ತಮುತ್ತ ಇಂದು ಬೆಳ್ಳಂಬೆಳಗ್ಗೆ ಮಳೆಯಾಗಿದೆ. ದೆಹಲಿಯ ಎನ್‌ಸಿಆರ್ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ.
ಇದಲ್ಲದೆ, ಮುಂದಿನ ಎರಡು ಗಂಟೆಗಳಲ್ಲಿ ಉತ್ತರ ಪ್ರದೇಶ ಮತ್ತು ಹರಿಯಾಣದ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ಇನ್ನು ಮುಂಬೈ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆ ನಗರಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ.
PublicNext
12/07/2022 12:56 pm