ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸೆ.19ರಂದು ಯೆಲ್ಲೋ, ಸೆ.20ರಂದು ಆರೆಂಜ್ ಹಾಗೂ ಸೆ.21 ಮತ್ತು ಸೆ.22ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ದಿನಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಕಡಲ ತೀರದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿಮೊಗ್ಗದಲ್ಲಿ ಸೆ.19ರಂದು ಯೆಲ್ಲೋ ಅಲರ್ಟ್ ಇದ್ದರೆ, ಸೆ.20, 21ರಂದು ಆರೆಂಜ್ ಅಲರ್ಟ್ ಹಾಗೂ ಸೆ.22ರಂದು ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಮುಂದಿನ 48 ದಿನ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
PublicNext
18/09/2020 10:28 pm