ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ 72ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ವಿಶೇಷ ದಿನದಂದು ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ ಬರೋಬ್ಬರಿ 8 ಚಿರತೆಗಳನ್ನು ಭಾರತಕ್ಕೆ ಬರಲಿವೆ. ಮಧ್ಯಪ್ರದೇಶದ ಕುನ್ಹೋ-ಪಾಲ್ ಪುರ್ ವನ್ಯಜೀವಿ ಸಂರಕ್ಷಣಾ ಕೇಂದ್ರದಲ್ಲಿ ಈ ಚಿರತೆಗಳನ್ನು ಬಿಡಲಾಗುತ್ತದೆ. ಎರಡರಿಂದ ಆರು ವರ್ಷ ವಯಸ್ಸಿನ ಮೂರು ಗಂಡು, ಐದು ಹೆಣ್ಣು ಚಿರತೆಗಳನ್ನು ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾಗಿದೆ. ಇನ್ನು ನಮೀಬಿಯಾದಿಂದ 8,000 ಕಿಲೋಮೀಟರ್ ಪ್ರಯಾಣ ಮಾಡಿ ಚಿರತೆಗಳು ಭಾರತಕ್ಕೆ ಬಂದಿವೆ.
ಗ್ವಾಲಿಯಾರ್ ನಿಂದ ಹೆಲಿಕಾಪ್ಟರ್ ಮೂಲಕ ಚೀತಾಗಳನ್ನು ಮಧ್ಯಪ್ರದೇಶದ ಕುನ್ಹೋ ನ್ಯಾಷನಲ್ ಪಾರ್ಕ್ ಗೆ ತರಲಾಗುತ್ತದೆ. ಬೆಳಗ್ಗೆ 10:45ಕ್ಕೆ ಪ್ರಧಾನಿ ಮೋದಿ ಖುದ್ದಾಗಿ ಇವುಗಳನ್ನು ರಿಲೀಸ್ ಮಾಡಲಿದ್ದಾರೆ.ಇನ್ನು ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ 8 ಚೀತಾಗಳನ್ನು ತರಲಾಗುತ್ತಿದೆ.ವಿಮಾನ ಪ್ರಯಾಣ ವೇಳೆ ಚಿರತೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ.
PublicNext
17/09/2022 08:17 am