ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಲೆಗಳ ಅಬ್ಬರಕ್ಕೆ ದೋಣಿಯಿಂದ ಅಯ ತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ,ಐವರ ತಂಡದಿಂದ ರಕ್ಷಣೆ

ಮಂಗಳೂರು: ಮೀನುಗಾರಿಕಾ ದೋಣಿಯಿಂದ ಸಮುದ್ರಕ್ಕೆ ಆಯ ತಪ್ಪಿ ಬಿದ್ದ ಮೀನುಗಾರನನ್ನು ಐವರ ತಂಡ ರಕ್ಷಿಸಿರುವ ಘಟನೆ

ಮಂಗಳೂರಿನ ಉಳ್ಳಾಲ ಅಳಿವೆಬಾಗಿಲು ಸಮೀಪ ನಡೆದಿದೆ.

ನವಾಝ್‌, ರಕ್ಷಿಸಲ್ಪಟ್ಟ ಮೀನುಗಾರ. ಓಷಿಯನ್‌ ಬ್ರೀಝ್‌ ದೋಣಿಯಲ್ಲಿದ್ದ ಉಳಿಯ ನಿವಾಸಿ ಪ್ರೇಮ್‌ ಪ್ರಕಾಶ್‌ ಡಿಸೋಜ, ಅನಿಲ್‌ ಮೊಂತೇರೊ, ಸೂರ್ಯ ಪ್ರಕಾಶ್‌ ಡಿಸೋಜ ಹಾಗೂ ಬೆಂಗ್ರೆ ನಿವಾಸಿ ರಿತೇಶ್‌ ಮತ್ತು ಅಜಿತ್‌ ಎಂಬುವವರು ರಕ್ಷಿಸಿದವರು.

ಬೆಳಗ್ಗೆ ನಾಡದೋಣಿ ಮೀನುಗಾರಿಕೆಯವರು ಸಮುದ್ರದಲ್ಲಿ ಬಲೆ ಹಾಕಿ ವಾಪಸ್ಸಾಗಿದ್ದರು. ಏಡಿ ಸಿಗುವ ಸಮಯವಾಗಿದ್ದರಿಂದಾಗಿ ಬಲೆ ಹಾಕಲಾಗಿತ್ತು. ಬಹುತೇಕ ದೋಣಿಯವರು ಹಾಕಿರುವ ಬಲೆಯನ್ನು ತೆಗೆಯಲು ಸಮುದ್ರಕ್ಕೆ ತೆರಳಿದ್ದು, ಭಾರಿ ಗಾಳಿ ಬೀಸುತ್ತಿದ್ದ ಹಿನ್ನೆಲೆಯಲ್ಲಿ ಹಲವು ದೋಣಿಗಳು ತೆರಳದೇ ಉಳಿದಿದ್ದವು. ಆದರೆ, ಹೋದಂತಹ ದೋಣಿಯೊಂದು ಬಲೆ ತೆಗೆದು ವಾಪಸಾಗುವಾಗ ಅಳಿವೆಬಾಗಿಲು ಸಮೀಪ ಕಲ್ಲುಗಳ ಮಧ್ಯೆಯಿಂದ ಒಳಬರುವ ಸಂದರ್ಭ ಎಂಜಿನ್‌ ನಿಷ್ಕ್ರಿಯಗೊಂಡಿದೆ. ಇದೇ ವೇಳೆ ಭಾರೀ ಗಾಳಿಯೊಂದು ಅಪ್ಪಳಿಸಿದಾಗ ಮೀನುಗಾರಿಕಾ ದೋಣಿಯಲ್ಲಿದ್ದ ನವಾಝ್‌ ಎಂಬುವವರು ಸಮುದ್ರಕ್ಕೆ ಬಿದ್ದಿದ್ದಾರೆ.

ಆದರೆ, ಅಲೆಗಳ ಅಪ್ಪಳಿಸುವಿಕೆಗೆ ದೋಣಿ ನಿಲ್ಲಿಸಲಾಗದೆ ಮೀನುಗಾರರು ಸಮುದ್ರಕ್ಕೆ ಬಿದ್ದವನ ರಕ್ಷಣೆಗೆ ಥರ್ಮಕೋಲ್ ಎಸೆದು ಕಾಪಾಡಿದ್ದಾರೆ.

Edited By : Nagesh Gaonkar
PublicNext

PublicNext

29/08/2021 10:13 pm

Cinque Terre

144.08 K

Cinque Terre

4