ನವದೆಹಲಿ: ಒಡಿಶಾ ರಾಜ್ಯದಾದ್ಯಂತ ರಣ ಬಿಸಿಲಿಗೆ ಜನ ತತ್ತರಿಸಿ ಹೋಗುತ್ತಿದ್ದಾರೆ. ನಿತ್ಯ 40 ರಿಂದ 44 ಡಿಗ್ರಿವರೆಗೂ ತಾಪಮಾನ ದಾಖಲಾಗುತ್ತಿದೆ. ಫ್ಯಾನ್ ಗಾಳಿಯೂ ಬಿಸಿಯಾಗಿ ಬರುತ್ತಿದೆ. ತಾಪಮಾನ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅನೇಕರು ಮನೆಯ ಹೊರಗೆ ರೊಟ್ಟಿ, ದೋಸೆ ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಬಿಸಿಲಲ್ಲಿ ಬೇಯಿಸಿಕೊಳ್ಳುತ್ತಿದ್ದಾರೆ. ಅನೇಕರು ಇಂತಹ ಹಾಸ್ಯಮಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ನೀಲಮಧಬ್ ಪಾಂಡಾ ಎಂಬುವರು ಟ್ವಿಟರ್ ನಲ್ಲಿ ಮಹಿಳೆಯೊಬ್ಬರು ಕಾರಿನ ಬಾನೆಟ್ ಮೇಲೆ ರೊಟ್ಟಿಗಳನ್ನು ತಯಾರಿಸುತ್ತಿರುವ ದೃಶ್ಯ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
28/04/2022 04:16 pm