ಮೈಸೂರು: ಹುಲಿಗಳ ಸಂತತಿ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಬಿಳಿ ಹುಲಿವೊಂದು 3 ಮರಿಗಳಿಗೆ ಜನ್ಮ ನೀಡಿದೆ.
ಕಳೆದ ಎರಡು ವಾರಗಳ ಹಿಂದೆ 8 ವರ್ಷದ ಹೆಣ್ಣು ಹುಲಿ ತಾರ 3 ಮರಿಗಳಿಗೆ ಜನ್ಮ ನೀಡಿದೆ. ಇನ್ನು ಹೆಣ್ಣು ಹುಲಿ ಮರಿಗಳ ಆಗಮನದಿಂದ ಮೃಗಾಲಯದಲ್ಲಿ ಸಂಭ್ರಮ ಮನೆಮಾಡಿದೆ.
ಸದ್ಯ ಎರಡು ವಾರಗಳ ಬಳಿಕ ಹುಲಿಯ ಚಲನವಲನ ಹಾಗೂ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು.ಇದೀಗ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ತಾಯಿ ಹಾಗೂ ಮರಿಗಳು ಆರೋಗ್ಯವಾಗಿವೆ ಎಂದು ಮೃಗಾಲಯದ ಅಧಿಕಾರಿ ತಿಳಿಸಿದ್ದಾರೆ.
PublicNext
10/05/2022 09:04 pm