ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಧಾರಾಕಾರ ಸುರಿದ ಮಳೆಯಿಂದಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ನದಿಪಾತ್ರದ ನಿವಾಸಿಗಳು ಈ ವರ್ಷವೂ ನೆರೆ ಭೀತಿಯಲ್ಲಿದ್ದಾರೆ.
ಹವಾಮಾನ ಇಲಾಖೆ ಈಗಾಗಲೇ ಜೂ.7ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ ತಾಲೂಕು ವ್ಯಾಪ್ತಿಯ ಗಂಗಾವಳಿ ನದಿ ಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಮೋಟನಕುರ್ವೆ, ದಂಡೆಬಾಗ, ಕುರ್ವೆ ನಡುಗಡ್ಡೆಯ ಭಾಗದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಇದಲ್ಲದೆ ಕಲ್ಲೇಶ್ವರ- ಡೊಂಗ್ರಿ- ರಾಮನಗುಳಿ ಭಾಗದಲ್ಲಿಯು ನೀರಿನ ಮಟ್ಟ ಏರಿಕೆಯಾಗಿ, ಗುಳ್ಳಾಪುರದಿಂದ ಕಲ್ಲೇಶ್ವರ- ಶೇವಕಾರ ಕೈಗಡಿಗೆ ಹೋಗುವ ತಾತ್ಕಾಲಿಕ ಸೇತುವೆ ಕೂಡ ನೀರಿನಲ್ಲಿ ಮುಳುಗಡೆಯಾಗಿದೆ. ಹೀಗಾಗಿ ಈ ಭಾಗದ ಸಂಪರ್ಕ ಕಡಿತಗೊಂಡಿದೆ. ಮಂಜುಗುಣಿ ಮತ್ತು ಕೊಡ್ಸಣಿ ಬಳಿ ಸೇತುವೆ ನಿರ್ಮಾಣ ಮಾಡಲು ಗಂಗಾವಳಿ ನದಿಯಲ್ಲಿ ಹಾಕಲಾಗಿರುವ ಭಾರಿ ಪ್ರಮಾಣದ ಮಣ್ಣಿನಿಂದ ಈ ವರ್ಷ ಕೃತಕ ನೆರೆ ಸೃಷ್ಟಿಯಾಗುತ್ತಿದೆ.
ಗ್ರಾಮೀಣ ಭಾಗದ ಕೆಲವೆಡೆ ಮರ ಬೀಳುತ್ತಿರುವದರಿಂದಾಗಿ ಸಂಚಾರಕ್ಕೆ ತಾತ್ಕಾಲಿಕ ತೊಂದರೆಯಾಗಿದೆ. ತೆರವು ಕಾರ್ಯಚರಣೆ ಇಂದು ಮುಂದುವರಿದೆ
ಮಳೆಯ ಅವಾಂತರಗಳಿಂದಾಗಿ ಜಿಲ್ಲಾಡಳಿತ ಅಂಗನವಾಡಿಯಿಂದ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಮುಂದುವರೆಸಿದೆ.
PublicNext
06/07/2022 02:39 pm