ಗದಗ: ನಗರದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಅರ್ಧ ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಬೀದಿ ಬದಿಯ ಹಣ್ಣು, ತರಕಾರಿ ವ್ಯಾಪಾರಸ್ಥರು ಪರದಾಡುವಂತಾಯಿತು.
ಗದಗ-ಬೆಟಗೇರಿ ಅವಳಿ ನಗರ, ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಳೆಯ ಅಬ್ಬರ ಜೋರಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಿ, ಈರುಳ್ಳಿ, ಮೆಕ್ಕೆಜೋಳ ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿ ಉಂಟಾಗುತ್ತಿದೆ.
PublicNext
17/07/2022 10:02 pm