ವರದಿ - ಗೀತಾಂಜಲಿ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳ್ಳಗೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಶಾಲೆ ಒಳಗೆ ಒಂಟಿ ಸಲಗ ಎಂಟ್ರಿ ಕೊಟ್ಟಿದ್ದರೂ ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ. ಆನೆ ನೋಡಿ ಗಾಬರಿಗೊಂಡಿದ್ದ ಶಿಕ್ಷಕರು, ಮಕ್ಕಳು ಅರಣ್ಯ ಸಿಬ್ಬಂದಿಗೆ ಕರೆ ಮಾಡಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಸಿಬ್ಬಂದಿಗಳು ಆನೆಯನ್ನು ಶಾಲೆಯಿಂದ ಹೊರಗೆ ಓಡಿಸಿದ್ದಾರೆ. ಇನ್ನು ಈ ವಿಡಿಯೋ ಸ್ಥಳೀಯರ ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ.
PublicNext
27/07/2022 02:55 pm