ಜಕಾರ್ತ: ಇಂಡೋನೇಷ್ಯಾದ ಸುಲವೇಸಿ ದ್ವೀಪದಲ್ಲಿ ಸಂಭವಿಸಿದ ಭಾರೀ ಭೂಕಂಪದಿಂದ 35 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಲವೇಸಿಯಲ್ಲಿ 6.2 ಮ್ಯಾಗ್ನಿಟ್ಯೂಡ್ ಭೂಕಂಪ ಸಂಭವಿಸಿದೆ ಎಂದು ವಿಪತ್ತು ಏಜೆನ್ಸಿಯನ್ನು ಉಲ್ಲೇಖಿಸಿ ಅಜೆನ್ಸ್ ಫ್ರಾನ್ಸ್-ಪ್ರೆಸ್ ಸುದ್ದಿ ಸಂಸ್ಥೆ ಶುಕ್ರವಾರ ವರದಿ ಮಾಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಭೂಕಂಪದಲ್ಲಿ 60ಕ್ಕೂ ಹೆಚ್ಚು ಮನೆಗಳು ಧರೆಗೆ ಉರುಳಿವೆ. ಇಲ್ಲಿನ ಆಸ್ಪತ್ರೆಯೂ ಉರುಳಿಬಿದ್ದಿದ್ದು, 12ಕ್ಕೂ ಹೆಚ್ಚು ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಇದ್ದಕ್ಕಿದ್ದಂತೆ ಆಸ್ಪತ್ರೆ ಅಲುಗಾಡಿದಂತಾಗಿದ್ದು, ನೋಡ ನೋಡುತ್ತಿದ್ದಂತೆ ಒಂದು ಭಾಗ ಕುಸಿದು ಬಿದ್ದಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮನೆಗಳು ಹಾಗೂ ಆಸ್ಪತ್ರೆಯ ಕಟ್ಟಡದ ಕೆಳಗೆ ಸಿಲುಕಿರುವವರನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ ಇದುವರೆಗೂ ಯಾರನ್ನೂ ಹೊರಗೆ ತೆಗೆಯಲು ಸಾಧ್ಯವಾಗಿಲ್ಲ. ಪಶ್ಚಿಮ ಸುಲವೇಸಿಯ ರಾಜಧಾನಿ ಮಮುಜುವಿನಿಂದ 36 ಕಿ.ಮೀ. ದೂರದಲ್ಲಿ ಈ ಭೂಕಂಪ ಸಂಭವಿಸಿದೆ.
PublicNext
15/01/2021 01:55 pm