ಢಾಕಾ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬಾಂಗ್ಲಾದೇಶ ಜನ ತತ್ತರಿಸಿ ಹೋಗಿದೆ. ಈ ರಣ ಮಳೆಯಿಂದ 25 ಮಂದಿ ಸಾವನ್ನಪ್ಪಿದ್ದು, 40 ಲಕ್ಷಕ್ಕೂ ಹೆಚ್ಚು ಜನ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇನ್ನು ಮಳೆಯ ತೀವ್ರತೆ ಹೆಚ್ಚಿರುವ ಕಾರಣ ದೇಶಾದ್ಯಂತ ಪ್ರೌಢಶಾಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಶಾಲಾ ತರಗತಿ ಕೊಠಡಿಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ.
ದೇಶದ ಈಶಾನ್ಯ ಭಾಗವು ಬಹುತೇಕ ನೀರಿನಿಂದ ಆವೃತ್ತವಾಗಿದೆ. ವಾರಾಂತ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆ ಇದೆ. ನಿನ್ನೆ ಒಂದೇ ದಿನ 21 ಮಂದಿ ಮೃತಪಟ್ಟಿದ್ದು, ಈವರೆಗೆ 25 ಮಂದಿ ಮೃತಪಟ್ಟಿದ್ದು ಬೆಳಕಿಗೆ ಬಂದಿದೆ.
PublicNext
18/06/2022 10:57 pm