ಬೀಜಿಂಗ್: ಚೀನಾದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಎಲ್ಲವೂ ಅಲ್ಲೋಲ ಕಲ್ಲೋಲವಾಗಿದೆ. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 6.8ರಷ್ಟು ದಾಖಲಾಗಿದೆ.
ಸುಮಾರು 46ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಹಾಗೂ 50ಕ್ಕೂ ಹೆಚ್ಚು ಜನ ಅವಶೇಷಗಳ ಅಡಿ ಸಿಲುಕಿದ್ದಾರೆ. ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಸಂತ್ರಸ್ತರಿಗೆ ಪುನರ್ವಸತಿ ಒದಗಿಸಲಾಗಿದೆ. ಸಾವು-ನೋವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಕೊರೊನಾ ತೀವ್ರತೆಯ ನಡುವೆ ಭೂಕಂಪನದ ಹೊಡೆದ ಸಿಚುವಾನ್ ಜನರಿಗೆ ಕಂಟಕವಾಗಿ ಕಾಡುತ್ತಿದೆ.
PublicNext
06/09/2022 07:57 am