ನೀರಿನಲ್ಲಿಯೇ ಎತ್ತಿನ ಬಂಡಿಯ ಮೂಲಕ ಸಾಗುತ್ತಿರುವ ರೈತರು...! ಈ ದೃಶ್ಯ ಕಂಡು ಬಂದಿದ್ದು ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ.
ಹಾವೇರಿ ಜಿಲ್ಲೆಯಾದ್ಯಂತ ಸತತ ಹತ್ತು ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕುಮುದಾವತಿ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಗಳ ಸೇತುವೆಗಳು ಜಲಾವೃತಗೊಂಡಿವೆ. ಜನರು ಬೇರೆ ಕಡೆ ಹೋಗಲು ಹರಸಾಹಸ ಪಡುತ್ತಿದ್ದಾರೆ.
ಈ ನಡುವೆಯೇ ಮಾಸೂರು ಗ್ರಾಮದ ರೈತರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸೇತುವೆ ಮೇಲೆ ಎತ್ತಿನ ಬಂಡಿ ಮೂಲಕ ದಾಟುತ್ತಿದ್ದಾರೆ. ಸ್ವಲ್ಪ ಯಾಮಾರಿದರೂ ಅಪಾಯ ಗ್ಯಾರಂಟಿ. ಆದರೆ, ಅನಿವಾರ್ಯವಾಗಿ ಬೇರೆ ಕಡೆ ಹೋಗಲೇ ಬೇಕಾದಂತಹ ಪರಿಸ್ಥಿತಿ ಈ ಗ್ರಾಮಸ್ಥರಿಗೆ ಎದುರಾಗಿದೆ.
PublicNext
16/07/2022 04:09 pm