ಶಿವಮೊಗ್ಗ: ರಾಜ್ಯದಲ್ಲಿ ವರುಣಾರ್ಭಟ ಹೆಚ್ಚಾದ ಹಿನ್ನೆಲೆಯಲ್ಲಿ , ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ.
ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇನ್ನೂ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಹಿನ್ನೆಲೆ ಭದ್ರಾವತಿಯ ಸೇತುವೆ ಮೇಲೆ ನೀರು ಹರಿಯಲು ಆರಂಭಿಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಮೇಲೆ ಸಂಚಾರ ಮಾಡುವುದನ್ನು ಪೊಲೀಸರು ಬಂದ್ ಮಾಡಿದ್ದಾರೆ.
ಇತ್ತ ಉಡುಪಿ ಜಿಲ್ಲೆಯಲ್ಲಿ ಸಹ ವಿಪರೀತ ಮಳೆಯಾಗುತ್ತಿದ್ದು, ಬ್ರಹ್ಮಾವರ ತಾಲೂಕಿನ ಸೀತಾನದಿ ಅಪಾಯ ಮಟ್ಟ ತಲುಪಿದ್ದು, ಕಿಂಡಿ ಅಣೆಕಟ್ಟಿನ ಮೇಲೆ ನೀರು ಹರಿಯುತ್ತಿದೆ.
ಸುತ್ತಮುತ್ತಲಿನ ಮನೆ ಕೃಷಿ ಭೂಮಿ ಭತ್ತದ ಬೇಸಾಯದ ಗದ್ದೆಗಳಿಗೆ ನೀರು ನುಗ್ಗಿದೆ.
PublicNext
20/09/2020 05:20 pm