ಬೆಂಗಳೂರು: ರಾಜ್ಯದಲ್ಲಿ ಸೆ.28ರ ಸೋಮವಾರದಿಂದ ಅ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.30 ಹಾಗೂ ಅ.1ರಂದು ರಾಜ್ಯದ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯದ ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿಯು ಮಂಗಳವಾರ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಮುಂಗಾರು ಕ್ಷೀಣಿಸಿದ್ದರಿಂದ ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಎರಡು ದಿನಗಳಿಂದ ಮಳೆ ಪ್ರಮಾಣ ತಗ್ಗಿದೆ. ಮುಂದಿನ 48 ಗಂಟೆಗಳಲ್ಲಿ ಕೆಲವೆಡೆ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.
ಇನ್ನು ದಕ್ಷಿಣ ಒಳನಾಡಿನಲ್ಲಿ ಅ. 1 ಮತ್ತು 2ರಂದು ಸಾಧಾರಣ ಮಳೆಯಾಗಬಹುದು ಎನ್ನಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸೆ.28ರಿಂದ ಅ.1 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
PublicNext
29/09/2020 07:42 am