ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರ ರಾಜಧಾನಿಯಲ್ಲಿ ಕನಿಷ್ಠ ತಾಪಮಾನ 3.3 ಡಿ.ಸೆ. ದಾಖಲು

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗುರುವಾರ ಕನಿಷ್ಠ ತಾಪಮಾನವು 3.3 ಡಿಗ್ರಿ ಸೆಲ್ಸಿಯಸ್ ಕುಸಿದಿದೆ.

ನಗರದಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಸತತ ಮೂರನೇ ದಿನವೂ ನಗರದಲ್ಲಿ ಶೀತ ಅಲೆಯ ಪರಿಸ್ಥಿತಿ ಮುಂದುವರಿದಿದೆ ಎಂದು ಐಎಂಡಿಯ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಕುಲ್ ದೀಪ್ ಶ್ರೀವಾಸ್ತವ್ ಹೇಳಿದರು.

ಲೋಧಿ ರಸ್ತೆಯಲ್ಲಿ ಕನಿಷ್ಠ ತಾಪಮಾನವು 3.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದೆಹಲಿಯಲ್ಲಿ ಶುಕ್ರವಾರವೂ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆ ನಂತರದ ದಿನಗಳಲ್ಲಿ ಹಿಮಾಲಯದ ಹವೆಯಲ್ಲಿ ಉಂಟಾಗುವ ಬದಲಾವಣೆಯಿಂದ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ.

ಜನವರಿ 1ರಿಂದ 6ರ ತನಕ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗಬಹುದು. ಅಲ್ಲದೆ ಜನವರಿ 3 ರಿಂದ 5ರ ತನಕ ಸ್ವಲ್ಪ ಮಟ್ಟಿಗೆ ಮಳೆಯಾಗುವ ಸಾಧ್ಯತೆಯೂ ಇದೆ.

Edited By : Nirmala Aralikatti
PublicNext

PublicNext

31/12/2020 12:25 pm

Cinque Terre

29.6 K

Cinque Terre

0