ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಜ. 8ರವರೆಗೆ ಮಳೆ- ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಬೆಂಗಳೂರು: ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಎರಡು ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಹಿನ್ನೆಲೆಯಲ್ಲಿ ಮೂರು ದಿನ ಮಳೆ ಸುರಿಯುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಜನವರಿ 8ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Edited By : Vijay Kumar
PublicNext

PublicNext

05/01/2021 12:58 pm

Cinque Terre

50.46 K

Cinque Terre

0