ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆ ಹಾಗೂ ಇಂದು ಬೆಳಗ್ಗೆ ಮಳೆಯಾಗಿದೆ. ಅಷ್ಟೇ ಅಲ್ಲದೆ ಮುಂದಿನ 4 ದಿನ ಗುಡುಗು ಸಿಡಿಲು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 9 ಜಿಲ್ಲೆಗಳಲ್ಲಿ ಬುಧವಾರ ತುಂತುರು ಮಳೆಯಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಚಿತ್ರದುರ್ಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಅಕಾಲಿಕ ಮಳೆಗೆ ಬೆಂಗಳೂರಿನಲ್ಲಿ ಹಲವು ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದ ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ತಿಲಕ್ ನಗರದ ಸಾಗರ್ ಅಪೋಲೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೆಂಕಟೇಶ್ (41) ಮೃತ ದುರ್ದೈವಿ.
PublicNext
07/01/2021 11:42 am