ಚಾಮರಾಜನಗರ: ಸಮೀಪದ ಯಡಬೆಟ್ಟದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿರುವ ವೈದ್ಯರ ವಸತಿಗೃಹ ಕಟ್ಟಡಕ್ಕೆ ಬುಧವಾರ ರಾತ್ರಿ ಚಿರತೆಯೊಂದು ನುಗ್ಗಿದೆ. ರಾತ್ರಿ 9.30 ಸುಮಾರಿಗೆ ಕಟ್ಟಡದ ಮೊದಲ ಮಹಡಿಯಲ್ಲಿ ಚಿರತೆ ಓಡಾಡಿದೆ.
ಚಿರತೆಯನ್ನು ಕಣ್ಣಾರೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಚಿರತೆಯು ಯಾರಿಗೂ ತೊಂದರೆ ಕೊಟ್ಟಿಲ್ಲ. ಸಂಸ್ಥೆಯು ಬೆಟ್ಟ ಗುಡ್ಡ ಪ್ರದೇಶದಲ್ಲಿದ್ದು, ಚಿರತೆ ಸಾಮಾನ್ಯವಾಗಿ ಓಡಾಡುತ್ತಿರುತ್ತವೆ. ಈ ಪ್ರದೇಶದಲ್ಲಿ ಇನ್ನೂ ಹಲವು ಚಿರತೆಗಳಿದ್ದು ಚಾಮರಾಜನಗರ ಮೆಡಿಕಲ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸದಾ ಭೀತಿಯಲ್ಲೇ ದಿನ ದೂಡುತ್ತಿದ್ದಾರೆ.
PublicNext
07/01/2021 05:40 pm