ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ತೀವ್ರತೆ ಹಾಗೂ ಪೂರ್ವವಲಯದ ಮೋಡಗಳ ಚಲನೆ ಹೆಚ್ಚಾಗಿರುವ ಕಾರಣ ಜ.8 ಮತ್ತು ಜ.9ಕ್ಕೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿ ಒಟ್ಟು ಏಳು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಂಭವ ಇದೆ. ಹೀಗಾಗಿ ಈ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜ.8 ಮತ್ತು ಜ.9ಕ್ಕೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮಿ.ಮೀನಿಂದ 115.5 ಮಿ.ಮೀನವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಜ.12ರ ವರೆಗೆ ಮಳೆ: ರಾಜ್ಯದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅರ್ಲಟ್ ಇರುವುದರೊಂದಿಗೆ ಜ.12ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಇನ್ನು ಕೆಲವೆಡೆ ತುಂತುರು ಮಳೆಯಾಗಲಿದೆ. ಗರಿಷ್ಠ ತಾಪಮಾನ 25 ಡಿ. ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿ.ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
PublicNext
08/01/2021 07:14 pm