ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರಾಖಂಡದಲ್ಲಿ ಹಿಮ ಸ್ಫೋಟ : 13 ಗ್ರಾಮಗಳ ರಸ್ತೆ ಬಂದ್

ಡೆಹ್ರಾಡೂನ್ : ಎಲ್ಲವೂ ತಣ್ಣಗಿದ್ದ ಸಂದರ್ಭದಲ್ಲಿ ಸ್ಫೋಟಗೊಂಡಿದ್ದು ಹಿಮ ಇದರಿಂದಾದ ಸಮಸ್ಯೆಗಳು ಮಾತ್ರ ಸಾವಿರಾರುವಿಪತ್ತು ಒಂದೆರಡಲ್ಲ. ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿದು ನದಿಯಲ್ಲಿ ಪ್ರವಾಹ ಉಂಟಾದ ಪರಿಣಾಮ 13 ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.ದುರಂತದಲ್ಲಿ ಇದುವರೆಗೆ 32 ಜನರು ಮೃತಪಟ್ಟಿದ್ದು, ಸುಮಾರು 206 ಜನರು ನಾಪತ್ತೆಯಾಗಿದ್ದಾರೆಂದು ಅಲ್ಲಿನ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಎನ್ ಟಿಪಿಸಿಯ 480 ಮೆಗಾವಾಟ್ ಸಾಮರ್ಥ್ಯದ ತಪೋವನ-ವಿಷ್ಣುಗಡ ಯೋಜನೆ ಮತ್ತು 13.2 ಮೆಗಾವಾಟ್ ಸಾಮರ್ಥ್ಯದ ರಿಷಿ ಗಂಗಾ ಜಲವಿದ್ಯುತ್ ಯೋಜನೆಗಳ ಸುರಂಗಗಳಲ್ಲಿ ನೀರು ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ. ರಸ್ತೆ ಸಂಪರ್ಕ ಕಳೆದುಕೊಂಡಿರುವ ಗ್ರಾಮಗಳ ಜನರಿಗೆ ಆಹಾರ ಸಾಮಗ್ರಿಗಳನ್ನು ತಲುಪಿಸಲು ಹೆಲಿಕಾಪ್ಟರ್ ಗಳನ್ನು ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ವಿದ್ಯಾರ್ಥಿಗಳಿಗೆ ಶಾಲೆಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಧುಲಿಗಂಗಾ ನದಿ ಪ್ರದೇಶದಲ್ಲಿರುವ ಜುಗ್ಜು, ಜುವಾಗ್ವಾಡ್, ಭನ್ಯಾಲ್, ಗಹಾರ್ ಸೇರಿದಂತೆ ಹಲವು ಗ್ರಾಮಗಳು ರಸ್ತೆ ಸಂಪರ್ಕ ಕಳೆದುಕೊಂಡಿವೆ.

Edited By : Nirmala Aralikatti
PublicNext

PublicNext

10/02/2021 02:01 pm

Cinque Terre

65.81 K

Cinque Terre

3

ಸಂಬಂಧಿತ ಸುದ್ದಿ