ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ-ಹೆಸಗೋಡು ಗ್ರಾಮಗಳ ಅಂಚಿನಲ್ಲಿ ಒಂಟಿ ಸಲಗ ಘೀಳಿಡುತ್ತಾ ನಡೆಯುತ್ತಿರುವುದನ್ನು ಕಂಡು ಹಳ್ಳಿಗರು ಆತಂಕದಲ್ಲಿ ಬದುಕುತ್ತಿದ್ದಾರೆ.
ಗುತ್ತಿ, ಬೈರಾಪುರ, ಗೌಡಹಳ್ಳಿ, ಸಾರಗೋಡು, ಹೆಸಗೋಡು ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಆನೆ ಕಾಟ ಹೆಚ್ಚಾಗಿದೆ. ಎರಡ್ಮೂರು ಜನ ಪ್ರಾಣ ಕೂಡ ಕಳೆದುಕೊಂಡಿದ್ದಾರೆ. ನೂರಾರು ಜನ ಮನೆ-ತೋಟ-ಗದ್ದೆಗಳನ್ನ ಕಳೆದುಕೊಂಡಿದ್ದಾರೆ. ತೋಟ, ಗದ್ದೆಗಳಲ್ಲಿ ದಾಂಧಲೆ ಮಾಡುತ್ತಿದ್ದ ಒಂಟಿ ಸಲಗ ಇದೀಗ ಗ್ರಾಮದ ಅಂಚಿಗೂ ಕಾಲಿಟ್ಟಿರೋದು ಹಳ್ಳಿಗರಲ್ಲಿ ಆತಂಕವನ್ನುಂಟು ಮಾಡಿದೆ.
ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಇಂದಿಗೂ ನಿಂತಿಲ್ಲ. ಮೂರ್ನಾಲ್ಕು ಕಾಡಾನೆಗಳ ಹಿಂಡು ತಾಲೂಕಿನ ಗ್ರಾಮೀಣ ಭಾಗದಲ್ಲಿ ದಾಳಿ ಮಾಡಿ ಕಾಫಿ, ಅಡಿಕೆ, ಮೆಣಸು, ಬಾಳೆ ಸೇರಿದಂತೆ ಅನೇಕ ಬೆಳೆಗಳನ್ನ ಹಾಳು ಮಾಡುತ್ತಿವೆ. ಈ ಬಗ್ಗೆ ಅರಣ್ಯಾಧಿಕಾರಿಗಳ ಗಮನಕ್ಕೆ ತರಲಾಗಿದೆ ಆದರೂ ಅವರು ಆನೆ ಹಿಡಿಯುವ ಕಾರ್ಯಾಚರಣೆಗೆ ಮುಂದಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
PublicNext
19/02/2021 10:27 am