ಬೆಂಗಳೂರು: ಬಂಗಾಳ ಕೊಲ್ಲಿ ಉತ್ತರ ಭಾಗದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಜುಲೈ 31ರವರೆಗೆ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 27ರಿಂದ ಜುಲೈ 31ರವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
PublicNext
28/07/2021 08:38 am