ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಣಿವೆ ರಾಜ್ಯದಲ್ಲಿ ಕಣ್ಣೀರು ತರಿಸುತ್ತಿದೆ ಮೇಘ : ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಶ್ರೀನಗರ : ಕಣಿವೆ ರಾಜ್ಯಕ್ಕೆ ಮಳೆ ಕಣ್ಣೀರು ತರಿಸುತ್ತಿದೆ. ಮಹಾ ಮಳೆಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 30 ರಿಂದ 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಡೆಕ್ಕನ್ ಟೆಹ್ಸೀಲ್ ಪ್ರಾಂತ್ಯದ ಹೊಂಝಾರ್ ಎಂಬ ಕುಗ್ರಾಮದಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿಹೋಗಿವೆ ಎಂದು ತಿಳಿದುಬಂದಿದೆ.

ವಿಚಾರ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(NDRF)ದ ಸಿಬ್ಬಂದಿಗಳು ಗ್ರಾಮಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ ಮತ್ತು ಇದುವರೆಗೆ 17 ಮಂದಿಯನ್ನು ರಕ್ಷಿಸಿದ್ದಾರೆ. ನಾಪತ್ತೆಯಾಗಿರುವವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ.

ಇನ್ನು ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ಮತ್ತು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಕಣಿವೆ ರಾಜ್ಯಕ್ಕೆ ಅಗತ್ಯವಾದ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

28/07/2021 03:19 pm

Cinque Terre

16.84 K

Cinque Terre

0

ಸಂಬಂಧಿತ ಸುದ್ದಿ