ವಾಷಿಂಗ್ಟನ್: ಅಮೆರಿಕದ ಅಲಸ್ಕ ಪರ್ಯಾಯ ದ್ವೀಪದಲ್ಲಿ ಬುಧವಾರ ತಡರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 8.2ರಷ್ಟು ತೀವ್ರತೆ ದಾಖಲಾಗಿದೆ.
ಅಮೆರಿಕದ ಭೂಗರ್ಭ ಸಮೀಕ್ಷೆ ಇಲಾಖೆಯು ಸುನಾಮಿ ಸಂಭವಿಸುವ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಿದೆ. ಪೆರ್ರಿವಿಲ್ಲೆ ನಗರದಿಂದ 91 ಕಿಲೋ ಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದೆ.
PublicNext
29/07/2021 02:39 pm