ರಾಯಚೂರು: ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಆಲಮಟ್ಟಿ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿರುವ ಹಿನ್ನೆಯಲ್ಲಿ ನಾರಾಯಣಪುರ ಜಲಾಶಯದಲ್ಲಿ ನೀರಿನ ಸಂಗ್ರಹ ನಿಗದಿತಮಟ್ಟ ತಲುಪಿದೆ.
ನಾರಾಯಣಪುರ ಜಲಾಶಯದಿಂದ 4 ಲಕ್ಷ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ರಾಯಚೂರಿನಲ್ಲಿ ಪ್ರವಾಹ ಪರಸ್ಥಿತಿ ಉಂಟಾಗಿದೆ. ದೇವದುರ್ಗದ ಕೊಪ್ಪರ ಹಳ್ಳದ ಸೇತುವೆ ಮುಳುಗಡೆಯಾಗಿದ್ದು, ಕೊಪ್ಪರ-ಗೂಗಲ್ ರಸ್ತೆ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಮುಳುಗಡೆಯಾದ ಸೇತುವೆಯಲ್ಲೇ ವ್ಯಕ್ತಿಯೊಬ್ಬ ಕಾರು ಚಲಾಯಿಸಿ ದುಸ್ಸಾಹಸ ಮಾಡಿದ್ದಾನೆ.
ಹಳ್ಳಗಳು ತುಂಬಿರುವುದರಿಂದ ಸೇತುವೆಗಳು ಮುಳುಗಡೆಯಾಗಿವೆ. ಈ ವೇಳೆ ರಸ್ತೆ ಬಂದ್ ಆಗಿದ್ದರೂ ಕಾರು ಚಾಲಕ ಹುಚ್ಚು ಸಾಹಸಕ್ಕೆ ಕೈ ಹಾಕಿ ಹೇಗೋ ಕೊನೆಗೂ ದಡ ಸೇರಿದ್ದಾನೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
PublicNext
30/07/2021 10:20 am