ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ, ಮಲೆನಾಡಿನಲ್ಲಿ ಹೈ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳಿಂದ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾವಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಇಂದೂ ಸಹ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನಲ್ಲೂ ಇಂದು ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

Edited By : Vijay Kumar
PublicNext

PublicNext

10/08/2021 07:33 am

Cinque Terre

48.84 K

Cinque Terre

0