ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ ಗ್ರಾಮದೊಳಗೆ ಕಾಡಾನೆಗಳು ಏಕಾಏಕಿ ನುಗ್ಗಿ ಆತಂಕ ಸೃಷ್ಟಿಸಿವೆ.
ಕಾಡಾನೆಗಳು ಗ್ರಾಮಕ್ಕೆ ನುಗ್ಗಿದ ಬಗ್ಗೆ ಮಾಹಿತಿ ಪಡೆದ ಅರಣ್ಯ ಸಿಬ್ಬಂದಿ ಅವರನ್ನು ಓಡಿಸಲು ಹರಸಾಹಸಪಟ್ಟರು. ಈ ದೃಶ್ಯವನ್ನು ಕೆಲ ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿವೆ.
ಇತ್ತ ಮೂಲರಹಳ್ಳಿ ಗ್ರಾಮದ ಜಮೀನುಗಳಿಗೆ ಆನೆಗಳು ನಿಗ್ಗಿದ್ದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಫಿ, ಮೆಣಸು ಬೆಳೆಗೆ ಹಾನಿಯಾಗಿದೆ. ಕಾಡಾನೆಗಳ ನಿರಂತರ ದಾಳಿಯಿಂದ ಕಂಗೆಟ್ಟಿರುವ ರೈತರು ಅರಣ್ಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
11/08/2021 10:52 am