ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆ. 15 ರ ವರೆಗೂ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಆಗಸ್ಟ್ 15 ರ ವರೆಗೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಮಳೆ ಮುಂದುವರೆಯಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕುಗೊಳ್ಳಲಿದೆ. ಅದೇ ರೀತಿ ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ರಾಯಚೂರು, ವಿಜಯಪುರ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ.

Edited By : Nirmala Aralikatti
PublicNext

PublicNext

12/08/2021 08:23 am

Cinque Terre

55.75 K

Cinque Terre

0

ಸಂಬಂಧಿತ ಸುದ್ದಿ