ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಆಗಸ್ಟ್ 24 ರವರೆಗೂ ಕರ್ನಾಟಕದಲ್ಲಿ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲೂ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ನಾಳೆಯಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಆಗಸ್ಟ್ 23 ಮತ್ತು 24ರಂದು ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಮುಖ್ಯವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣ ತನ್ನ ಆರ್ಭಟ ತೋರಿಸಲಿದ್ದಾನೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ 9 ಜಿಲ್ಲೆಗಳಲ್ಲಿ ಆಗಸ್ಟ್ 24ರವರೆಗೆ ಅಧಿಕ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
PublicNext
21/08/2021 09:34 am