ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉತ್ತರಾಖಂಡದಲ್ಲಿ ಮತ್ತೆ ಗುಡ್ಡ ಕುಸಿತ- ನೂರಾರು ಜನರು ಗ್ರೇಟ್ ಎಸ್ಕೇಪ್.!

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮತ್ತೆ ಗುಡ್ಡ ಕುಸಿತ ಮುಂದುವರಿದಿದ್ದು, ಚಂಪಾವತ್‌ನ ಸ್ವಲಾ ಬಳಿ ತನಕ್ಪುರ- ಚಂಪಾವತ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಭಾರೀ ಭೂಕುಸಿತ ಸಂಭವಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಅನೇಕರು ಜೀವ ಉಳಿಸಿಕೊಳ್ಳಲು ತಮ್ಮ ವಾಹನವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗುವುದನ್ನು ಕಾಣಬಹುದು. ಈ ವೇಳೆ ಕೆಲವರು ಭೂಕುಸಿತದ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಈ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, "ಗುಡ್ಡ ಕುಸಿತದ ಅವಶೇಷಗಳನ್ನು ತೆರವುಗೊಳಿಸಲು ಕನಿಷ್ಠ ಎರಡು ದಿನಗಳನ್ನು ತೆಗೆದುಕೊಳ್ಳುತ್ತದೆ" ಎಂದು ತಿಳಿಸಿದ್ದಾರೆ.

Edited By : Manjunath H D
PublicNext

PublicNext

24/08/2021 12:04 pm

Cinque Terre

72.27 K

Cinque Terre

0

ಸಂಬಂಧಿತ ಸುದ್ದಿ