ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ಹೈವೇ ಫಾಲ್ಸ್‌: ಕಾರು ಚಾಲಕನ ಪರದಾಟ.!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅನೇಕ ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.

ದೆಹಲಿ ವಿಮಾನ ನಿಲ್ದಾಣ ಸಮೀಪದ ಫ್ಲೈಓವರ್ ಒಂದ ಮೇಲೆ ನೀರು ನಿಂತು ಫಾಲ್ಸ್‌ನಂತೆ ಕೆಳಗೆ ಬೀಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಕಡೆ ಫ್ಲೈಓವರ್ ಮೇಲಿಂದ ನೀರು ಬೀಳುತ್ತಿದ್ದರೆ, ಮತ್ತೊಂದು ಕಡೆ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಕಾರು ಚಾಲಕನೋರ್ವ ಪರದಾಡಿದ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಮಹಾಮಳೆಗೆ ದೆಹಲಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ರಸ್ತೆಗಳೆಲ್ಲ ಕೆರೆಗಳಾಗಿ ಬದಲಾಗಿವೆ. ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Edited By : Vijay Kumar
PublicNext

PublicNext

01/09/2021 03:08 pm

Cinque Terre

39.94 K

Cinque Terre

0