ನವದೆಹಲಿ: ಕಳೆದ ಎರಡ್ಮೂರು ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ ದೆಹಲಿಯ ಪ್ರಮುಖ ರಸ್ತೆಗಳು ಈಗ ಹರಿವ ನದಿಯಂತಾಗಿವೆ. ಸಂಚಾರ ವ್ಯವಸ್ಥೆ ಹಾಗೂ ಜನಜೀವನ ಅಸ್ತವ್ಯಸ್ತವಾಗಿದೆ. ಈಗಾಗಲೇ ದೆಹಲಿಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮಂಗಳವಾರ ಬೆಳಗ್ಗೆ ಅರ್ಧ ಗಂಟೆ ಸುರಿದ ಮಳೆಯಿಂದಾಗಿ ರಸ್ತೆಗಳ ಮೇಲೆ ನೀರು ನಿಂತಿತ್ತು. ಇಂದು ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಗೆ ರಸ್ತೆಗಳ ಮೇಲೆ ಎರಡರಿಂದ ಮೂರು ಅಡಿವರೆಗೂ ನೀರು ನಿಂತಿದ್ದು, ಸವಾರರು ವಾಹನ ಚಲಾಯಿಸಲು ಪರದಾಡುತ್ತಿದ್ದಾರೆ.
PublicNext
01/09/2021 03:21 pm