ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ ಮಾತ್ರವಲ್ಲದೆ ಇನ್ನೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಸೆ. 6ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಸೆ. 5 ಮತ್ತು 6ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
PublicNext
03/09/2021 07:57 am