ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಲಬುರಗಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆಯಾಗಿದ್ದು, ಈ ಮಳೆಯಿಂದ ಕಲಬುರಗಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸೇಡಂ-ಕಲಬುರಗಿ ಮಧ್ಯೆ ಸಂಪರ್ಕ ಕಡಿತಗೊಂಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆ.6 ರಿಂದ ಸೆ.8 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
PublicNext
06/09/2021 07:54 am