ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೆ.12ರವರೆಗೂ ರಾಜ್ಯದಲ್ಲಿ ಭಾರೀ ಮಳೆ- ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಸೆಪ್ಟೆಂಬರ್ 12ರವರೆಗೂ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೊತೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

Edited By : Vijay Kumar
PublicNext

PublicNext

09/09/2021 08:12 am

Cinque Terre

40.6 K

Cinque Terre

3