ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು, ಕರಾವಳಿ, ಕೊಡಗು, ಉತ್ತರ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
PublicNext
14/09/2021 07:28 am