ಬೆಂಗಳೂರು: ಕೊಂಚ ಇಳಿಕೆಯಾಗಿದ್ದ ಮಳೆಯ ಆರ್ಭಟ ಮತ್ತೆ ಆರಂಭವಾಗಿದ್ದು, ಇದೀಗ ರಾಜ್ಯದ ಹಲವೆಡೆ ಸೇರಿ ದೇಶದಲ್ಲಿ ಇನ್ನೂ ಕೆಲದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 28ರವರೆಗೂ ಭಾರೀ ಮಳೆಯಾಗಲಿದೆ. ಮುಖ್ಯವಾಗಿ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ರಾಯಚೂರು, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
PublicNext
25/09/2021 09:03 am