ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಗುಲಾಬ್​ ಚಂಡಮಾರುತ ನಿನ್ನೆ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿದೆ. ಮುಂದಿನ 12 ಗಂಟೆಗಳ ಕಾಲ ಚಂಡಮಾರುತದ ಪ್ರಭಾವ ಹೆಚ್ಚಾಗಿರಲಿದ್ದು, ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸೈಕ್ಲೋನ್ ಪರಿಣಾಮ ಕರ್ನಾಟಕದ ಮೇಲೂ ಪರಿಣಾಮ ಬೀರುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಾತ್ರವಲ್ಲ ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಸುರಿಯಲಿದೆ.

Edited By : Vijay Kumar
PublicNext

PublicNext

26/09/2021 07:45 am

Cinque Terre

66.6 K

Cinque Terre

0