ಭುವನೇಶ್ವರ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಗುಲಾಬ್ ಚಂಡಮಾರುತ ಸೆ.26 ರಂದು ಸಂಜೆ ಆಂಧ್ರದ ಭೂಪ್ರದೇಶಕ್ಕೆ ಅಪ್ಪಳಿಸಿದೆ. ಪರಿಣಾಮ ಆರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಈ ಚಂಡಮಾರುತ ಕಳಿಂಗಪಟ್ಟಣಂ ಮತ್ತು ಗೋಪಾಲಪುರ ನಡುವೆ ಉತ್ತರ ಆಂಧ್ರಪ್ರದೇಶ ಹಾಗೂ ದಕ್ಷಿಣ ಒಡಿಶಾವನ್ನು ದಾಟಲಿದ್ದು ಕಳಿಂಗಪಟ್ಟಣಂನಲ್ಲಿ ಹೆಚ್ಚಿನ ಗಾಳಿ ಬೀಸುತ್ತಿದೆ. ಈ ನಡುವೆ ಶ್ರೀಕಾಕುಳಂನಲ್ಲಿ ಮೀನುಗಾರರು ನಾಪತ್ತೆಯಾಗಿದ್ದಾರೆಂಬ ಮಾಹಿತಿ ಇದೆ. ಗಾಳಿಯ ಅಬ್ಬಕ್ಕೆ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಈಜಿಕೊಂಡು ಸುರಕ್ಷಿತವಾಗಿ ದಡ ಸೇರಿದ್ದಾರೆ.
PublicNext
27/09/2021 07:30 am