ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಾದ್ಯಂತ ರಾತ್ರಿಯಿಡೀ ಮಳೆ ಸುರಿದಿದ್ದು, ಸುರಿದ ಮಳೆಯ ಆರ್ಭಟಕ್ಕೆ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ. ಚಿತ್ರದುರ್ಗ ನಗರದ ಹೊರ ವಲಯದಲ್ಲಿರುವ ಐತಿಹಾಸಿಕ ಮಲ್ಲಾಪುರ ಕೆರೆ ತುಂಬಿ ಹರಿಯುತ್ತಿದೆ. ಉಳಿದಂತೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ವಿವಿಧ ತಾಲೂಕಿನ ಹಳ್ಳಿಗಳಲ್ಲಿ ಹಳ್ಳ ಕೊಳ್ಳಗಳು, ಚೆಕ್ ಡ್ಯಾಂ ಗಳು, ಉಕ್ಕಿ ಹರಿಯುತ್ತಿವೆ. ಹಲವು ವರ್ಷಗಳ ಬಳಿಕ ಸಿರಿಗೆರೆ ಕೆರೆಗೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಕೆರೆ ತುಂಬುವ ಅಂತ ತಲುಪಿದ್ದು,
ಸುತ್ತಮುತ್ತಲಿನ ರೈತರು ಹಾಗೂ ಗ್ರಾಮಸ್ಥರಲ್ಲಿ ಸಂತಸ ಉಂಟುಮಾಡಿದೆ.
ಇನ್ನೂ ಹಿರಿಯೂರು, ಹೊಸದುರ್ಗ, ಮೊಳಕಾಲ್ಮೂರು, ಚಳ್ಳಕೆರೆ ಭಾಗದಲ್ಲೂ ಉತ್ತಮ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಚೆಕ್ ಡ್ಯಾಂ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ತುಂಬಿದ ಚೆಕ್ ಡ್ಯಾಂ ಗಳನ್ನು ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳಿಂದ ವೀಕ್ಷಿಸಿದ್ದಾರೆ.
PublicNext
07/10/2021 11:02 am