ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 10ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗಿನಿಂದಲೇ ಜಿಟಿ-ಜಿಟಿ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಮತ್ತು ಬುಧವಾರ ಮಲೆನಾಡನ್ನು ನೆನೆಪಿಸುವ ರೀತಿ ಮಳೆಯಾಗಿತ್ತು. ಪರಿಣಾಮ ಅಲ್ಲಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನೈಋತ್ಯ ಮುಂಗಾರು ಸೆಪ್ಟೆಂಬರ್ಗೆ ಅಂತ್ಯಗೊಂಡಿದ್ದರೂ ಚಂಡಮಾರುತದಿಂದಾಗಿ ಮಳೆ ಮುಂದುವರೆದಿದೆ.
ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
PublicNext
08/10/2021 04:54 pm