ಗದಗ: ಜಿಲ್ಲೆಯ ರೋಣ ತಾಲೂಕಿನ ಮಾರನಬಸರಿ ಗ್ರಾಮದ ಹೊರ ವಲಯದಲ್ಲಿ ಚಿರತೆ ಓಡಾಟದ ಆತಂಕ ಶುರುವಾಗಿದೆ.
ಗಜೇಂದ್ರಗಡ ಗುಡ್ಡದಲ್ಲಿ ಕಳೆದ ವಾರ ಚಿರತೆ ಪ್ರತ್ಯಕ್ಷವಾಗಿತ್ತು ಎನ್ನಲಾಗಿತ್ತು. ಆದರೆ ಇಂದು ಮುಂಜಾನೆ ಮಾರನಬಸರಿ ಹಳ್ಳದಲ್ಲಿ ಚಿರತೆ ಓಡಾಟ ಕಂಡಿದ್ದೇನೆ ಎಂದು ಗ್ರಾಮಸ್ಥರೊಬ್ಬರು ಮಾಹಿತಿ ನೀಡಿದ್ದಾರೆ.
ಚಿರತೆ ಪ್ರತ್ಯಕ್ಷವಾದ ಸುದ್ದಿ ಕೇಳಿದ ಮಾರನಬಸರಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮುಂಜಾಗ್ರತೆ ಕ್ರಮವಾಗಿ ಮಾರನಬಸರಿ ಗ್ರಾಮ ಪಂಚಾಯತಿಯಿಂದ ಧ್ವನಿ ವರ್ಧಕದ ಮೂಲಕ ಜಮೀನುಗಳಿಗೆ ತೆರಳದಂತೆ ರೈತರಿಗೆ ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿ ಚಿರತೆ ಸೆರೆಗೆ ಕೂಂಬಿಂಗ್ ನಡೆಸಿದ್ದಾರೆ.
PublicNext
11/10/2021 04:18 pm