ತಿರುವನಂತಪುರಂ: ದೇವರನಾಡು ಕೇರಳದಲ್ಲಿ ನಿರಂತರ ಮಳೆಯಾಗುತ್ತಿದೆ. ಇದರಿಂದಾಗಿ ಕೊಟ್ಟಾಯಂನಲ್ಲಿ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿ 13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಹಲವೆಡೆ ಪ್ರವಾಹದ ಆತಂಕ ಎದುರಾಗಿದ್ದು, ಮನೆಗಳು ಕೊಚ್ಚಿ ಹೋಗಿವೆ. ಆಸ್ತಿ-ಪಾಸ್ತಿಗಳು ನಷ್ಟವಾಗಿವೆ. ಕೇರಳದಲ್ಲಿ ಬೇರೆ ಜಿಲ್ಲೆಗಳಿಗಿಂತಲೂ ಕೊಟ್ಟಾಯಂ ಮತ್ತು ಪಥನಾಂತಿಟ್ಟ ಹೆಚ್ಚು ಹಾನಿಗೊಳಗಾಗಿವೆ. ಮಳೆಯಿಂದ ರಸ್ತೆಗಳೆಲ್ಲ ನದಿಯಂತಾಗಿದ್ದು, ಕೆಎಸ್ ಆರ್ ಟಿಸಿ ಬಸ್ ಮಳೆ ನೀರಿನಲ್ಲಿ ಅರ್ಧ ಮುಳುಗಿರುವ ವಿಡಿಯೋಗಳು ವೈರಲ್ ಆಗಿವೆ.
ಕೇರಳದಲ್ಲಿ ಇನ್ನೂ 2-3 ದಿನ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕೇರಳದಲ್ಲಿ ನಿನ್ನೆ ಸಂಜೆಯಿಂದ ಮಳೆ ಹೆಚ್ಚಾಗಿದೆ. ನಾಳೆಯವರೆಗೂ ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
PublicNext
16/10/2021 10:14 pm