ಬೆಂಗಳೂರು: ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳು ನೀರಿನಿಂದ ಆವೃತವಾಗಿವೆ. ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಬಿಬಿಎಂಪಿಯಿಂದ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಇಂದು ಮಳೆ ಮುಂದುವರೆಯುವ ನಿರೀಕ್ಷೆಯಿದೆ.
PublicNext
17/10/2021 07:42 am