ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯನಗರ: ಸಿಡಿಲಿನ ಹೊಡೆತಕ್ಕೆ ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವರಲಹಳ್ಳಿ ಗ್ರಾಮದಲ್ಲಿ ಸಿಡಿಲಿನ ಬಡಿತಕ್ಕೆ ಮೂವರು ಮೃತಪಟ್ಟಿರುವ ಘಟನೆ ಜರುಗಿದೆ.

ಶಿವರಾಯಪ್ಪ (34), ಇವರ ಪುತ್ರ ಮೈಲಾರಪ್ಪ (11) ಹಾಗೂ ಹನುಮಂತಪ್ಪ (35) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಡಿಲಿನ ಹೊಡೆತಕ್ಕೆ 2 ಆಡುಗಳೂ ಸಹ ಮೃತಪಟ್ಟಿವೆ. ಆಡು ಮೇಯಿಸಲು ತೋಟಕ್ಕೆ ಹೋಗಿದ್ದ ಇವರು ಮಳೆಯ ಹಿನ್ನೆಲೆ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ.

Edited By : Shivu K
PublicNext

PublicNext

24/10/2021 10:28 pm

Cinque Terre

98.96 K

Cinque Terre

0